Education

ವರ್ಣ ಮಾಲೆಗಳು..

 ಅ,ಆ,ಇ,ಈ,ಉ,ಊ,ಋ,ಎ,ಏ,ಐ,ಒ,ಓ,ಔ,ಅಂ,ಅಃ.  ಕ,ಖ,ಗ,ಘ,ಙ.  ಚ,ಛ,ಜ,ಝ,ಞ.  ಟ,ಠ,ಡ,ಢ,ಣ.  ತ,ಥ,ದ,ಧ,ನ.  ಪ,ಫ,ಬ,ಭ,ಮ. ಯ,ರ,ಲ,ವ,ಶ,ಷ,ಸ,ಹ,ಳ.                  "ವರ್ಣಮಾಲೆ ಹಾಗೂ ಅವುಗಳ ವಿಧಗಳು''    ಕ್ರಮಬದ್ಧವಾಗಿ ಜೋಡಿಸಲ್ಪಟ್ಟ ಅಕ್ಷರಗಳ ಗುಂಪನ್ನು ವರ್ಣಮಾಲೆ ಎನ್ನುತ್ತಾರೆ.  ವರ್ಣಮಾಲೆಗಳನ್ನು ಕ್ರಮಬದ್ಧವಾಗಿ ಜೋಡಿಸಲ್ಪಟ್ಟ ಆಧಾರದ ಮೇಲೆ ಮುಖ್ಯವಾಗಿ ಮೂರು ವಿಭಾಗಗಳನ್ನಾಗಿ ವಿಭಾಗಿಸಲಾಗಿದೆ. ಅವುಗಳೆಂದರೆ, 1. ಸ್ವರಗಳು. 2. ವ್ಯಂಜನಗಳು. 3. ಯೋಗವಾಹಗಳು.  1. ಸ್ವರಗಳು.      ಯಾವುದೇ ಅಕ್ಷರಗಳ ಸಹಾಯವಿಲ್ಲದೆ, ಸ್ವತಂತ್ರವಾಗಿ ಉಚ್ಛರಿಸಲ್ಪಡುವ ಅಕ್ಷರಗಳನ್ನು ಸ್ವರಗಳು ಎಂದು ಕರೆಯುತ್ತೇವೆ.  ಈ ಸ್ವರಗಳಲ್ಲಿ ಮುಖ್ಯವಾಗಿ ಮೂರು ವಿಧಗಳಿವೆ. ಅವುಗಳೆಂದರೆ, ೧. ಹೃಸ್ವ ಸ್ವರ.  ಕಡಿಮೆ ಸಮಯದಲ್ಲಿ ಉಚ್ಚರಿಸಲ್ಪಡುವ ಅಥವಾ ಒಂದು ಮಾತ್ರ ಕಾಲದಲ್ಲಿ ಉಚ್ಛರಿಸಲ್ಪಡುವ ಅಕ್ಷರಗಳನ್ನು ಹೃಸ್ವ ಸ್ವರಗಳು ಎನ್ನುತ್ತಾರೆ.  ಅವುಗಳೆಂದರೆ: ಅ, ಇ, ಉ, ಋ, ಎ, ಒ.  ೨.ದೀರ್ಘ ಸ್ವರ.  ಹೆಚ್ಚು ಸಮಯದಲ್ಲಿ ಉಚ್ಛರಿಸಲ್ಪಡುವ ಅಥವಾ  ಎರಡು ಮಾತ್ರ ಕಾಲದಲ್ಲಿ ಉಚ್ಛರಿಸಲ್ಪಡುವ ಅಕ್ಷರಗಳನ್ನು ದೀರ್ಘ ಸ್ವರ ಎನ್ನುತ್ತೇವೆ.  ಅವುಗಳೆಂದರೆ: ಆ, ಈ, ಊ, ಏ, ಐ, ಓ, ಔ.  ೩. ...

ಆಗಸ್ಟ್ ೨, ೨೦೨೧

 

ಆಗಸ್ಟ್ ೨, ೨೦೨೧

“ಸೈರಸ್ ಪೂನವಲ್ಲಾ” ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದರು.

ಪುಣೆ ಮೂಲದ ಲಸಿಕ ತಯಾರಕ “ಸೀರಮ್ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾದ” ಅಧ್ಯಕ್ಷರಾದ ಡಾ. ಸೈರಸ್ ಪೂನವಲ್ಲಾ ಅವರು ೨೦೨೧ ರ ಪ್ರತಿಷ್ಠಿತ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. “ಕೋವಿಡ್ -೧೯” ಸಾಂಕ್ರಾಮಿಕ ಖಾಯಿಲೆಯ ಸಮಯದಲ್ಲಿ ಅವರು ಅಭಿವೃದ್ಧಿಪಡಿಸಿದ  “ಕೋವಿಶೀಲ್ಡ್” ಲಸಿಕೆ ಕೊರೊನ ಖಾಯಿಲೆ ತಡೆಗಟ್ಟುವಲ್ಲಿ ಯಶಸ್ವಿಯಾಗಿದೆ.

ಈ ಪ್ರಶಸ್ತಿಯು ಒಂದು ಲಕ್ಷ ರುಪಾಯಿ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಸೈರಸ್ ಪೂನವಲ್ಲಾ ಅವರು ಆಗಸ್ಟ್ ೧೩ ರಂದು ಈ ಪ್ರಶಸ್ತಿಯನ್ನು ಸ್ವೀಕರಿಸುತ್ತಾರೆ.

ಪ್ರಶಸ್ತಿಯ ಬಗ್ಗೆ

ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು ೧೯೮೩ ರಿಂದ ವಾರ್ಷಿಕವಾಗಿ ಲೋಕಮಾನ್ಯ ತಿಲಕರ ಮರಣ ದಿನವಾದ ಆಗಸ್ಟ್ ೧ ರಂದು ಲೋಕಮಾನ್ಯ “ತಿಲಕ್ ಟ್ರಸ್ಟ್” ವತಿಯಿಂದ ನೀಡಲಾಗುತ್ತದೆ. ಅದಾಗ್ಯೂ ಈ ವರ್ಷ ಕೊರೊನಾ ಕಾರಣದಿಂದಾಗಿ ಪ್ರಶಸ್ತಿ ನೀಡುವ ದಿನಾಂಕವನ್ನು ಬದಲಿಸಲಾಗಿದೆ.

**********

Comments

Popular posts from this blog

ಚೊಚ್ಚಲ ತಾಯ್ತನ.

ಸಂಶೋಧನೆಗಳು.

ವರ್ಣ ಮಾಲೆಗಳು..