Education

ವರ್ಣ ಮಾಲೆಗಳು..

 ಅ,ಆ,ಇ,ಈ,ಉ,ಊ,ಋ,ಎ,ಏ,ಐ,ಒ,ಓ,ಔ,ಅಂ,ಅಃ.  ಕ,ಖ,ಗ,ಘ,ಙ.  ಚ,ಛ,ಜ,ಝ,ಞ.  ಟ,ಠ,ಡ,ಢ,ಣ.  ತ,ಥ,ದ,ಧ,ನ.  ಪ,ಫ,ಬ,ಭ,ಮ. ಯ,ರ,ಲ,ವ,ಶ,ಷ,ಸ,ಹ,ಳ.                  "ವರ್ಣಮಾಲೆ ಹಾಗೂ ಅವುಗಳ ವಿಧಗಳು''    ಕ್ರಮಬದ್ಧವಾಗಿ ಜೋಡಿಸಲ್ಪಟ್ಟ ಅಕ್ಷರಗಳ ಗುಂಪನ್ನು ವರ್ಣಮಾಲೆ ಎನ್ನುತ್ತಾರೆ.  ವರ್ಣಮಾಲೆಗಳನ್ನು ಕ್ರಮಬದ್ಧವಾಗಿ ಜೋಡಿಸಲ್ಪಟ್ಟ ಆಧಾರದ ಮೇಲೆ ಮುಖ್ಯವಾಗಿ ಮೂರು ವಿಭಾಗಗಳನ್ನಾಗಿ ವಿಭಾಗಿಸಲಾಗಿದೆ. ಅವುಗಳೆಂದರೆ, 1. ಸ್ವರಗಳು. 2. ವ್ಯಂಜನಗಳು. 3. ಯೋಗವಾಹಗಳು.  1. ಸ್ವರಗಳು.      ಯಾವುದೇ ಅಕ್ಷರಗಳ ಸಹಾಯವಿಲ್ಲದೆ, ಸ್ವತಂತ್ರವಾಗಿ ಉಚ್ಛರಿಸಲ್ಪಡುವ ಅಕ್ಷರಗಳನ್ನು ಸ್ವರಗಳು ಎಂದು ಕರೆಯುತ್ತೇವೆ.  ಈ ಸ್ವರಗಳಲ್ಲಿ ಮುಖ್ಯವಾಗಿ ಮೂರು ವಿಧಗಳಿವೆ. ಅವುಗಳೆಂದರೆ, ೧. ಹೃಸ್ವ ಸ್ವರ.  ಕಡಿಮೆ ಸಮಯದಲ್ಲಿ ಉಚ್ಚರಿಸಲ್ಪಡುವ ಅಥವಾ ಒಂದು ಮಾತ್ರ ಕಾಲದಲ್ಲಿ ಉಚ್ಛರಿಸಲ್ಪಡುವ ಅಕ್ಷರಗಳನ್ನು ಹೃಸ್ವ ಸ್ವರಗಳು ಎನ್ನುತ್ತಾರೆ.  ಅವುಗಳೆಂದರೆ: ಅ, ಇ, ಉ, ಋ, ಎ, ಒ.  ೨.ದೀರ್ಘ ಸ್ವರ.  ಹೆಚ್ಚು ಸಮಯದಲ್ಲಿ ಉಚ್ಛರಿಸಲ್ಪಡುವ ಅಥವಾ  ಎರಡು ಮಾತ್ರ ಕಾಲದಲ್ಲಿ ಉಚ್ಛರಿಸಲ್ಪಡುವ ಅಕ್ಷರಗಳನ್ನು ದೀರ್ಘ ಸ್ವರ ಎನ್ನುತ್ತೇವೆ.  ಅವುಗಳೆಂದರೆ: ಆ, ಈ, ಊ, ಏ, ಐ, ಓ, ಔ.  ೩. ...

ಆಗಸ್ಟ್ 2,2021

 

                                                             ಆಗಸ್ಟ್ 2,2021

ವೈಸ್ ಅಡ್ಮಿರಲ್ ಎನ್. ಎಸ್. ಘೋರ್ಮೇಡ್ ನೌಕಾ ಸಿಬ್ಬಂದಿಯ ಉಪ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡರು.

ನವದೆಹಲಿಯಲ್ಲಿ ನಡೆದ ಔಪಚಾರಿಕ ಸಮಾರಂಭದಲ್ಲಿ ವೈಸ್ ಅಡ್ಮಿರಲ್ ಎನ್ ಎಸ್ ಘೋರ್ಮೇಡ್ ನೌಕಾಪಡೆಯ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಮೊದಲು ವೈಸ್ ಅಡ್ಮಿರಲ್ ಜಿ ಅಶೋಕ್ ಕುಮಾರ್ ಅವರು ನೌಕಾ ಪಡೆಯ ಉಪಮುಖ್ಯಸ್ಥರಾಗಿದ್ದರು. ಇವರು ಜುಲೈ 31, 2021 ರಂದು ನಿವೃತ್ತರಾದರು.

ಎನ್. ಎಸ್ ಘೋರ್ಮೇಡ್ ಅವರನ್ನು ಜನವರಿ 01, 1984 ರಂದು ಭಾರತೀಯ ನೌಕಾಪಡೆಗೆ ನಿಯೋಜಿಸಲಾಗಿತ್ತು. ಅವರಿಗೆ ಜನವರಿ 26,2017 ರಂದು “ಅತಿ ವಿಶಿಷ್ಟ ಸೇವಾ ಪದಕ”(ಎ.ವಿ.ಎಸ್.ಎಮ್) ಮತ್ತು 2007 ರಲ್ಲಿ ಭಾರತದ ರಾಷ್ಟ್ರಪತಿಗಳಿಂದ “ನೌಸೇನಾ ಪದಕ”(ಎನ್.ಎಂ)ವನ್ನು ಪಡೆದುಕೊಂಡಿದ್ದಾರೆ.

                           ********************



Comments

Popular posts from this blog

ಚೊಚ್ಚಲ ತಾಯ್ತನ.

ಸಂಶೋಧನೆಗಳು.

ವರ್ಣ ಮಾಲೆಗಳು..