Education

ವರ್ಣ ಮಾಲೆಗಳು..

 ಅ,ಆ,ಇ,ಈ,ಉ,ಊ,ಋ,ಎ,ಏ,ಐ,ಒ,ಓ,ಔ,ಅಂ,ಅಃ.  ಕ,ಖ,ಗ,ಘ,ಙ.  ಚ,ಛ,ಜ,ಝ,ಞ.  ಟ,ಠ,ಡ,ಢ,ಣ.  ತ,ಥ,ದ,ಧ,ನ.  ಪ,ಫ,ಬ,ಭ,ಮ. ಯ,ರ,ಲ,ವ,ಶ,ಷ,ಸ,ಹ,ಳ.                  "ವರ್ಣಮಾಲೆ ಹಾಗೂ ಅವುಗಳ ವಿಧಗಳು''    ಕ್ರಮಬದ್ಧವಾಗಿ ಜೋಡಿಸಲ್ಪಟ್ಟ ಅಕ್ಷರಗಳ ಗುಂಪನ್ನು ವರ್ಣಮಾಲೆ ಎನ್ನುತ್ತಾರೆ.  ವರ್ಣಮಾಲೆಗಳನ್ನು ಕ್ರಮಬದ್ಧವಾಗಿ ಜೋಡಿಸಲ್ಪಟ್ಟ ಆಧಾರದ ಮೇಲೆ ಮುಖ್ಯವಾಗಿ ಮೂರು ವಿಭಾಗಗಳನ್ನಾಗಿ ವಿಭಾಗಿಸಲಾಗಿದೆ. ಅವುಗಳೆಂದರೆ, 1. ಸ್ವರಗಳು. 2. ವ್ಯಂಜನಗಳು. 3. ಯೋಗವಾಹಗಳು.  1. ಸ್ವರಗಳು.      ಯಾವುದೇ ಅಕ್ಷರಗಳ ಸಹಾಯವಿಲ್ಲದೆ, ಸ್ವತಂತ್ರವಾಗಿ ಉಚ್ಛರಿಸಲ್ಪಡುವ ಅಕ್ಷರಗಳನ್ನು ಸ್ವರಗಳು ಎಂದು ಕರೆಯುತ್ತೇವೆ.  ಈ ಸ್ವರಗಳಲ್ಲಿ ಮುಖ್ಯವಾಗಿ ಮೂರು ವಿಧಗಳಿವೆ. ಅವುಗಳೆಂದರೆ, ೧. ಹೃಸ್ವ ಸ್ವರ.  ಕಡಿಮೆ ಸಮಯದಲ್ಲಿ ಉಚ್ಚರಿಸಲ್ಪಡುವ ಅಥವಾ ಒಂದು ಮಾತ್ರ ಕಾಲದಲ್ಲಿ ಉಚ್ಛರಿಸಲ್ಪಡುವ ಅಕ್ಷರಗಳನ್ನು ಹೃಸ್ವ ಸ್ವರಗಳು ಎನ್ನುತ್ತಾರೆ.  ಅವುಗಳೆಂದರೆ: ಅ, ಇ, ಉ, ಋ, ಎ, ಒ.  ೨.ದೀರ್ಘ ಸ್ವರ.  ಹೆಚ್ಚು ಸಮಯದಲ್ಲಿ ಉಚ್ಛರಿಸಲ್ಪಡುವ ಅಥವಾ  ಎರಡು ಮಾತ್ರ ಕಾಲದಲ್ಲಿ ಉಚ್ಛರಿಸಲ್ಪಡುವ ಅಕ್ಷರಗಳನ್ನು ದೀರ್ಘ ಸ್ವರ ಎನ್ನುತ್ತೇವೆ.  ಅವುಗಳೆಂದರೆ: ಆ, ಈ, ಊ, ಏ, ಐ, ಓ, ಔ.  ೩. ...

ಅಂತರಾಷ್ಟ್ರೀಯ ಪರ್ವತ ದಿನ. ಡಿಸೆಂಬರ್ 11.

  ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯು ಡಿಸೆಂಬರ್ 11ರಂದು ಅಂತರಾಷ್ಟ್ರೀಯ ಪರ್ವತ ದಿನವನ್ನು ಆಚರಿಸಲು ನಿರ್ಧರಿಸಿತು. ಪ್ರಪಂಚದ ಅರ್ಧದಷ್ಟು ಜೀವ ವೈವಿಧ್ಯದ ಹಾಟ್ಸ್ಪಾಟ್ ಗಳು ಮತ್ತು ಶೇಕಡ 30% ರಷ್ಟು ಪ್ರಮುಖ ಜೀವ ವೈವಿಧ್ಯ ತಾಣಗಳು ಪರ್ವತಗಳಾಗಿವೆ. ಮೆಕ್ಕೆಜೋಳ, ಆಲೂಗಡ್ಡೆ, ಬಾರ್ಲಿ, ಟೊಮೆಟೊ, ಸೇಬು ಮುಂತಾದ ಸಸ್ಯ ಮತ್ತು ಆಹಾರ ಪ್ರಬೇಧಗಳು ಯಥೇಚ್ಛವಾಗಿ ಕಾಣಿಸಿಕೊಳ್ಳುವುದು ಪರ್ವತಗಳ ಲ್ಲಿಯೆ. 

ಹವಮಾನ ಬದಲಾವಣೆ ಹಾಗೂ ಪರ್ವತಗಳ ಮೇಲಿನ ನಿರಂತರ ಶೋಷಣೆಯಿಂದಾಗಿ ಪರ್ವತಗಳು, ಅಳಿವಿನ ಅಂಚಿನಲ್ಲಿವೆ. ಆದ್ದರಿಂದ ಪರ್ವತಗಳ ರಕ್ಷಣೆ ಮತ್ತು ಅವುಗಳನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಈ ದಿನವನ್ನು ಆಚರಿಸಲಾಗುತ್ತದೆ. 

ಥೀಮ್: " ಸುಸ್ಥಿರ ಪರ್ವತ ಪ್ರವಾಸೋದ್ಯಮ".

ಧನ್ಯವಾದಗಳು.

Comments

Popular posts from this blog

ಚೊಚ್ಚಲ ತಾಯ್ತನ.

ಸಂಶೋಧನೆಗಳು.

ವರ್ಣ ಮಾಲೆಗಳು..